Breaking News
Home / ಜಿಲ್ಲೆ / ಬಿಜಾಪುರ / ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಶಿಕ್ಷಕ; ಅಮಾನತ್ತು ಆದೇಶ

ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಶಿಕ್ಷಕ; ಅಮಾನತ್ತು ಆದೇಶ

Spread the love

ವಿಜಯಪುರ: ಚುನಾವಣಾ ಕರ್ತವ್ಯದಲ್ಲಿ ಲೋಪವೆಸಗಿದ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಬಿದ್ದಿದೆ.

ಬರಟಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರುಗಳಾದ ಅಪ್ಪಣ್ಣ ಸವದಿ ಹಾಗೂ ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಅಲ್ಲಾಬಕ್ಷ ಇವರನ್ನು ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದದ್ದಕ್ಕೆ ಸೇವೆಯಿಂದ ಅಮಾನತ್ತು ಮಾಡಿ ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ನೀಡಿದ್ದಾರೆ.

 

ಕಳೆದ 23-3-2023ರಿಂದ ಇಲ್ಲಿಯವರೆಗೆ ಅರ್ಜುಣಗಿ ಮತ್ತು ಚಿಕ್ಕಗಲಗಲಿ ಚೆಕ್‍ಪೋಸ್ಟ ಗಳಲ್ಲಿ ಕರ್ತವ್ಯ ನಿರ್ವಹಿಸದೇ ಮುಖ್ಯೋಪಾಧ್ಯಾಯರು ಅನಧಿಕೃತ ಗೈರಹಾಜರಾಗಿದ್ದರು. ಕರ್ತವ್ಯ ಲೋಪವೆಸಗಿರುವುದರಿಂದ ಇವರ ವಿರುದ್ದ ಇಲಾಖಾ ವಿಚಾರಣೆ ಬಾಕಿ ಇರಿಸಿ, ಅಮಾನತ್ತುಗೊಳಿಸಲಾಗಿದೆ.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ