Breaking News

ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ..!

Spread the love

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಸಿಲಿಂಡರ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಹೌದು, ಗ್ರಾಹಕರು ಹೋಟೆಲ್ ಗಳಲ್ಲಿ ಊಟ, ತಿಂಡಿ ತಿನ್ನಲು ಯೋಚನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಈಗಾಗಲೇ ನಿರಂತರವಾಗಿ ಗ್ಯಾಸ್ ‍ಬೆಲೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೋಟೆಲ್ ಮಾಲೀಕರು ತಿಂಡಿ, ಬೆಲೆ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಏರಿಕೆ ಬಗ್ಗೆ ಕೇಂದ್ರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗದ ಹಿನ್ನೆಲೆ ಹೋಟೆಲ್ ಮಾಲೀಕರು ಬೆಲೆ ಹೆಚ್ಚಳ ಮಾಡುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ದರ ಏರಿಸದೇ ಇದ್ದರೆ ಹೋಟೆಲ್ ನಡೆಸುವುದು ಕಷ್ಟ ಎನ್ನುತ್ತಿರುವ ಹೋಟೆಲ್ ಮಾಲೀಕರು ಈಗಾಗಲೇ ದರ ಏರಿಕೆ ಬಗ್ಗೆ ಚರ್ಚೆ ನಡೆಸಿದ್ದು, ಶೀಘ್ರವೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳದ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈಗಾಗಲೇ ಒಂದು ಕಾಫಿ, ಟೀ ಬೆಲೆ 12-15 ರೂ ದಾಟಿದೆ.

ನಿರಂತರವಾಗಿ ಏರಿಕೆಯಾಗ್ತಿರೊ ಸಿಲಿಂಡರ್ ಬೆಲೆ ಸರಿದೂಗಿಸಲು ಹೋಟೆಲ್ ಉದ್ಯಮ ದರ ಏರಿಕೆಗೆ ಮುಂದಾಗಿದೆ. ವಾಣಿಜ್ಯ ಸಿಲಿಂಡರ್ ದರ ಏರಿಕೆಯೇ ಹೋಟೆಲ್ ಗಳಿಗೆ ಹೆಚ್ಚಿನ ಹೊರೆ ಆಗುತ್ತಿದೆ ಎಂದು ಹೇಳಲಾಗುತ್ತಿದೆ. ನಿರಂತರ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ತತ್ತರಿಸಿದ್ದು, . ಈ ಹಿನ್ನೆಲೆ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ ಮಾಡಲು ನಿರ್ಧರಿಸಿವೆ ಎನ್ನಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ