ಬೆಳಗಾವಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಎಲ್ಲಾ ಜಿಲ್ಲೆಗಳ ಪ್ರಮುಖ ಮಾರ್ಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಚುನಾವಣಾ ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.
ಈ ನಡುವೆ ಬೆಳಗಾವಿಯ ಕರ್ನಾಟಕ ಚೌಕ್ ಬಳಿಯ ಚೆಕ್ ಪೋಸ್ಟ್ ಬಳಿ ವ್ಯಕ್ತಿಯೋರ್ವ ಯಾವುದೇ ದಾಖಲೆ ಇಲ್ಲದೆ 26 ಲಕ್ಷ ರೂಪಾಯಿಯನ್ನು ತೆಗೆದುಕೊಂಡು ಹೋಗುತ್ತಿದ್ದ ಘಟನೆ ಬೆಳಕಿಗೆ ಬಂದಿದೆ ಕೂಡಲೇ ಪೊಲೀಸರು ಹಣ ಸೀಜ್ ಮಾಡಿದ ಮಾರ್ಕೆಟ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)
ಹಣದ ಮೂಲದ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿ, ತಮ್ಮ ಪತ್ನಿಯೊಂದಿಗೆ ಜಗಳವಾಡಿಕೊಂಡು ಮನೆಯಿಂದ ಹೊರ ಬಂದಿರುವುದು ತಿಳಿದು ಬಂದಿದೆ. ಅಲ್ಲದೆ ಬರುವ ವೇಳೆ 26 ಲಕ್ಷ ರೂಪಾಯಿ ನಗದು ಹಣವನ್ನು ತಂದಿದ್ದ ಆತ, ಗೋವಾದ ಕ್ಯಾಸಿನೋಗೆ ತೆರಳಲು ಮುಂದಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಣ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮುಂಬೈ ಮೂಲದ ಗುತ್ತಿಗೆದಾರ ಬಾದಲ್ ನರ್ಬಾಜೆ ಎಂದು ತಿಳಿದು ಬಂದಿದೆ