Breaking News

SSLC ಪರೀಕ್ಷೆಗೆ910 ವಿದ್ಯಾರ್ಥಿಗಳು ಗೈರು

Spread the love

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 271 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 910 ವಿದ್ಯಾರ್ಥಿಗಳು ಗೈರು ಹಾಜರಾದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 32,346 ವಿದ್ಯಾರ್ಥಿಗಳ ಪೈಕಿ 31,810 ವಿದ್ಯಾರ್ಥಿಗಳು ಹಾಜರಾದರು.

536 ಮಂದಿ ಗೈರು ಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 43,525 ವಿದ್ಯಾರ್ಥಿಗಳ ಪೈಕಿ 43,151 ವಿದ್ಯಾರ್ಥಿಗಳು ಹಾಜರಾದರು. 374 ವಿದ್ಯಾರ್ಥಿಗಳು ಗೈರು ಹಾಜರಾದರು.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊರೊನಾ ನಿಯಂತ್ರಣ ಮಾರ್ಗಸೂಚಿ ಅನ್ವಯ, ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ