Breaking News

ಅತ್ತ ಮಾಡಾಳ್​ಗೆ 14 ದಿನಗಳ ನ್ಯಾಯಾಂಗ ಬಂಧನ; ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆ, ಭಾರಿ ಚರ್ಚೆ

Spread the love

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅತ್ತ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ.

2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದ ರೆಸಾರ್ಟೊಂದರಲ್ಲಿ ಇಂದು ಜಿಲ್ಲಾವಾರು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ.

ಘಟಾನುಘಟಿ ನಾಯಕರ ಸಮ್ಮುಖದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 16 ಜಿಲ್ಲೆಗಳ ಜಿಲ್ಲಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವಾರು ನಾಯಕರು ಭಾಗಿಯಾಗಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಸದಸ್ಯರೂ ಉಪಸ್ಥಿತರಿದ್ದಾರೆ.

 

ಚನ್ನಗಿರಿ ಶಾಸಕ ವಿರೂಪಾಕ್ಷಪ್ಪ ಪ್ರಕರಣದ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಈ ಸಲ ಅವರಿಗೆ ಟಿಕೆಟ್ ಕೊಡುವುದು ಸರಿಯಲ್ಲ ಎನ್ನುವ ಜತೆಗೆ, ಅವರ ಪ್ರಕರಣ ಹೈಕಮಾಂಡ್ ನಾಯಕರಿಗೇ ಬಿಡೋಣ ಎಂದೂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಅಲ್ಲದೆ ಒಂದು ವೇಳೆ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಬೇರೆ ಯಾರನ್ನಾದ್ರೂ ಸೂಚಿಸಿದರೆ ಅದನ್ನು ಅವರನ್ನು ಪರಿಗಣಿಸಬೇಕೇ ಬೇಡವೇ? ಎಂಬುದರ ಕುರಿತು ಕೂಡ ಈ ಸಭೆಯಲ್ಲಿ ಚರ್ಚೆ ನಡೆದಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ