ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಸೇರಿದ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪಟ್ಟಣದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ ಒಡೆತನದ ಸೊಸೈಟಿ ಲಾಕರ್ ಗಳಲ್ಲಿ ಯಾರೆಲ್ಲ ಚಿನ್ನ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.
ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ
2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್. ಸಾಧುನವರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.