ಬೆಳಗಾವಿ: ಬಿಜೆಪಿ ಸರ್ಕಾರಕ್ಕೆ ಮಹಿಳಾ ಧ್ವನಿಯನ್ನು ಅಡಿಗಿಸಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಾತನಾಡಿದರು.
ಮಹಿಳೆ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು, ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮೇಲಿನ ದೂರು ದಾಖಲಿಸಿದ್ದಾರೆ. ಇದಕ್ಕೆಲ್ಲಾ ನಾವು ಬಗ್ಗುವವರಲ್ಲ ಎಂದು ವಾಗ್ದಾಳಿ ನಡೆಸಿದರು.
ಆರ್.ಆರ್. ಶಿರಾ ಮತಕ್ಷೇತ್ರದಲ್ಲಿ ಎರಡು ಕ್ಷೇತ್ರದಲ್ಲಿ ವಾತಾವರಣ ಚನ್ನಾಗಿದೆ. ಬಿಜೆಪಿ ಪಕ್ಷದ ಭ್ರಷ್ಟಾಚಾರ ದಿಂದ ಜನರು ಬೆಸತ್ತಿದ್ದಾರೆ. ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ನಂಬಿಕೆ ಇದೆ ಎಂದಿದ್ದಾರೆ.
ರಾಜ್ಯದಲ್ಲಿ ಪ್ರವಾಹ, ಕೊರೊನಾದಿಂದ ಜನರು ಸಂಕಷ್ಟದಲ್ಲಿದ್ದಾರೆ. ಆದರೆ ಕೇಂದ್ರ , ರಾಜ್ಯ ಸರ್ಕಾರ ಮಾತ್ರ ಯಾವುದಕ್ಕೂ ತಲೆ ಕಡಿಸಿಕೊಳ್ಳುತ್ತಿಲ್ಲ . ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬರಿ ಘೋಷಣೆಗೆ ಸೀಮಿತವಾಗಿವೆ ಎಂದು ಕಿಡಿಕಾರಿದರು.
ಲಾಕ್ ಡೌನ್ ಬಳಿಕ ಮೋದಿ ಅವರು 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದರು. ಆದರೆ ಇಲ್ಲಿಯವರೆಗೂ ಕರ್ನಾಟಕಕ್ಕೆ ಎಷ್ಟು ಪರಿಹಾರ ಬಂದಿದೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.
Laxmi News 24×7