Breaking News

ಕಾಂಚಾಣದ ಮೇಲೆ ಕೇಂದ್ರ ತಂಡಗಳ ನಿಗಾ

Spread the love

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಚುನಾವಣಾ ಅಕ್ರಮ ಹಾಗೂ ಹಣ ಬಲದ ಪ್ರಭಾವವನ್ನು ಸವಾಲಾಗಿ ತೆಗೆದುಕೊಂಡಿರುವ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಹದ್ದಿನ ಕಣ್ಣಿಡಲು ವಿಶೇಷ ತಂಡಗಳನ್ನು ರವಾನಿಸಲಿದೆ.

 

ಅದರಂತೆ, ಉತ್ತರ ಭಾರತದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಂದ “ಭಾರತೀಯ ಕಂದಾಯ ಸೇವೆ’ (ಐಆರ್‌ಎಸ್‌) ಅಧಿಕಾರಿಗಳ ಜೊತೆಗೆ ಐಎಎಸ್‌, ಐಪಿಎಸ್‌ ಅಧಿಕಾರಿಗಳ ತಂಡಗಳು ಶೀಘ್ರದಲ್ಲೇ ರಾಜ್ಯಕ್ಕೆ ಬಂದಿಳಿಯಲಿವೆ.

ಕರ್ನಾಟಕದಲ್ಲಿನ ಹಣ ಬಲದ್ದೇ ನಮಗೆ ಚಿಂತೆ ಮತ್ತು ಸವಾಲು ಎಂದು ಕಳೆದ ತಿಂಗಳು ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಚುನಾವಣಾ ಆಯೋಗ ಮುಖ್ಯ ಆಯುಕ್ತರು ಹೇಳಿದ್ದರು. ಅದಕ್ಕೆ ನಿದರ್ಶನವೆಂಬಂತೆ ಒಂದು ತಿಂಗಳ ಅವಧಿಯಲ್ಲಿ ಚುನಾವಣಾ ಅಕ್ರಮಗಳ ಮೊತ್ತ 80 ಕೋಟಿ ರೂ. ತಲುಪಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕೇಂದ್ರ ಚುನಾವಣಾ ಆಯೋಗದ ವಿಶೇಷ ತಂಡಗಳು ರಾಜ್ಯಕ್ಕೆ ಬರಲಿದ್ದು, 2018ರಲ್ಲಿ ಇದ್ದ ಈ ತಂಡಗಳ ಸಂಖ್ಯೆ ಈ ಬಾರಿ ದುಪ್ಪಟ್ಟು ಆಗಲಿದೆ ಎಂದು ಹೇಳಲಾಗಿದೆ.

ಚುನಾವಣೆ “ಅಕ್ರಮ ಮುಕ್ತ’ ವಾಗಿ ನಡೆಯಬೇಕು ಎಂದು ಪಣತೊಟ್ಟಿರುವ ಚುನಾವಣಾ ಆಯೋಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಪ್ರತಿ ಎರಡು ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರು ಐಆರ್‌ಎಸ್‌ ಅಧಿಕಾರಿಗಳನ್ನು ರಾಜ್ಯಕ್ಕೆ ನಿಯೋಜನೆ ಮಾಡುತ್ತಿದೆ. ಇವರಿಗೆ ಆದಾಯ ತೆರಿಗೆ, ವಾಣಿಜ್ಯ ತೆರಿಗೆ, ಅಬಕಾರಿ, ಕಂದಾಯ, ಪೊಲೀಸ್‌ ಇಲಾಖೆಯ ಅಧಿಕಾರಿಗಳ ತಂಡ ಸಾಥ್‌ ನೀಡಲಿವೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ