ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಮೈತ್ರಿ ವಿಚಾರ ಚರ್ಚೆಗೆ ಬರುವುದು ಸಹಜ. ಆದರೆ ಬದ್ಧ ವೈರಿಗಳಾಗಿರುವ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ರಾಜ್ಯದಲ್ಲಿ ಒಳ ಒಪ್ಪಂದ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೊಸ ಬಾಂಬ್ ಸಿಡಿಸಿದ್ದಾರೆ.
ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಹಳ ವರ್ಷಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಇದೆ. ಆಪರೇಷನ್ ಕಮಲ ಆದಾಗಿನಿಂದಲೂ ಇದೆಲ್ಲವೂ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕಳೆದ ಲೊಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡು ಜೆಡಿಎಸ್ ಸೋಲಿಸಿದರು. ಈಗ ಮಂಡ್ಯದಲ್ಲಿ ಮತ್ತೆ ಕುತಂತ್ರ ರಾಜಕಾರಣಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಸೇರಿ ಜನತೆಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ. ಈ ಬಗ್ಗೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರೇ ತೀರ್ಮಾನಿಸುತ್ತಾರೆ ಎಂದಿದ್ದಾರೆ.
Laxmi News 24×7