Breaking News

ಬೆಳಗಾವಿ: ಶಾಸಕರ ಪುತ್ರನ ವಾಹನ ತಪಾಸಣೆ ಮಾಡದ ಸಿಬ್ಬಂದಿ ತರಾಟೆಗೆ

Spread the love

ಬೆಳಗಾವಿ: ಚೆಕ್‌ಪೋಸ್ಟ್‌ನಲ್ಲಿ ಶಾಸಕ ಶ್ರೀಮಂತ ಪಾಟೀಲ ಅವರ ಪುತ್ರ ಶ್ರೀನಿವಾಸ ಸಂಚರಿಸುತ್ತಿದ್ದ ವಾಹನವನ್ನು ತಪಾಸಣೆ ಮಾಡದೆ ಬಿಟ್ಟ ಅಧಿಕಾರಿಗಳನ್ನು ತಹಶೀಲ್ದಾರ್‌ ಎಂ.ಎನ್.ಬಳಿಗಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಗವಾಡ-ಮೀರಜ್‌ ಚೆಕ್‌ಪೋಸ್ಟ್‌ನಲ್ಲಿ ಶನಿವಾರ ಪ್ರತಿ ವಾಹನ ತಪಾಸಣೆ ಮಾಡಲಾಗುತ್ತಿತ್ತು.

ಆದರೆ, ಸಾಂಗ್ಲಿಯಿಂದ ಕಾಗವಾಡಕ್ಕೆ ಬರುತ್ತಿದ್ದ ಶಾಸಕರ ಪುತ್ರನ ವಾಹನವನ್ನು ತಪಾಸಣೆ ಮಾಡಿಲ್ಲ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಬಳಿಗಾರ ಸ್ಥಳಕ್ಕೆ ಧಾವಿಸಿ, ಚೆಕ್‌ಪೋಸ್ಟ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ವಾಹನ ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ನೋಡಲ್ ಅಧಿಕಾರಗಳನ್ನು ನಿಯೋಜಿಸಿ – ಡಿಸಿಗೆ ಹೆಚ್.ಸಿ ಬಾಲಕೃಷ್ಣ ಸೂಚನೆ

Spread the loveರಾಮನಗರ: ಜಿಲ್ಲೆಯ ಐದು ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದ್ದು, ಬರ  ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲಾ ತಾಲೂಕುಗಳಲ್ಲೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ