Breaking News

SSLC ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ?

Spread the love

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು.

ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆಯುತ್ತಿರುವಾಗಲೇ ಈ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಶಿಕ್ಷಕರೇ ಇದಕ್ಕೆ ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

‘ಹಣಬರಹಟ್ಟಿ ಕೇಂದ್ರಕ್ಕೆ ಭೇಟಿ ನೀಡಿ, ಎಲ್ಲ ಆಯಾಮಗಳಿಂದ ಪರಿಶೀಲಿಸಿದ್ದೇನೆ. ಆದರೆ, ಇದೇ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ದೃಢಪಟ್ಟಿಲ್ಲ’ ಎಂದು ಎಂ.ಎನ್.ಪ್ಯಾಟಿ ‘ಪ್ರಜಾವಾಣಿ’ಗೆ ತಿಳಿಸಿದರು‌.


ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ಯಾಟಿ ಅವರು, ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ