Breaking News

ಇಂದೇ ಬಿಡುಗಡೆಯಾಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ

Spread the love

ನವದೆಹಲಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದ್ದು, ಕೆಲ ಹೊತ್ತಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಯಾಗಲಿದೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಮುಕ್ತಾಯವಾಗಿದ್ದು, ಸಭೆ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ. 40 ಕ್ಷೇತ್ರಗಳಿಗೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗಿದೆ ಎಂದರು.

ಈಗ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಸಭೆ ಬಳಿಕ ತಡರಾತ್ರಿ ವೇಳೆಗೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು. ಉಳಿದ ಕ್ಷೇತ್ರಗಳಿಗೂ ಶೀಘ್ರದಲ್ಲಿಯೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಈ ನಿಟ್ಟಿನಲ್ಲಿಯೂ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ