Breaking News

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

Spread the love

ಹಾವೇರಿ: ಪ್ರಥಮ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ.

ವಿನಾಯಕ ತಳವಾರ (17) ಮೃತ ವಿದ್ಯಾರ್ಥಿ.ಈತ ಮೃತ ಹಾವೇರಿ ನಗರದ ಹೊಸಮಠ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದ.

ಎರಡು ವಿಷಯಗಳಲ್ಲಿ ಅನುತ್ತೀರ್ಣ ಆಗಿದ್ದರಿಂದ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಜಿಗುಪ್ಸೆಯಾಗಿ ತನ್ನ ವಾಸದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ