Breaking News

ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ನೀಡಿದ ‘ಮಹಾ’ ಸರ್ಕಾರ

Spread the love

ಬೆಳಗಾವಿ: ‘ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ‘ಮಹಾತ್ಮ ಜ್ಯೋತಿರಾವ್‌ ಫುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ, ಮಹಾರಾಷ್ಟ್ರ ಸರ್ಕಾರ ಸೋಮವಾರ ಅದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಆಕ್ಷೇಪ ಹಾಗೂ ಕೆಪಿಸಿಸಿ ಆಕ್ರೋಶವನ್ನೂ ನಿರ್ಲಕ್ಷ್ಯ ಮಾಡಿದ ‘ಮಹಾ’ ಮುಖ್ಯಮಂತ್ರಿ ಏಕನಾಥ ಶಿಂಧೆ ಈ ನಿರ್ಣಯ ಕೈಗೊಂಡಿದ್ದಾರೆ.

 

ಗಡಿ ತಂಟೆ ತೀರ್ಪು ಹೊರಬೀಳುವವರೆಗೂ ಎರಡೂ ರಾಜ್ಯಗಳು ಯಾವುದೇ ರೀತಿಯ ಹಸ್ತಕ್ಷೇಪ ಮಾಡಕೂಡದು’ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಸಂಧಾನ ಸಭೆಯಲ್ಲಿ ಸೂಚಿಸಿದ್ದರು. ಕರ್ನಾಟಕ- ಮಹಾರಾಷ್ಟ್ರದ ತಲಾ ಮೂವರು ಸಚಿವರನ್ನು ಒಳಗೊಂಡ ಸಲಹಾ ಸಮಿತಿಯನ್ನೂ ರಚನೆ ಮಾಡಿದ್ದರು. ಏನೇ ನಿರ್ಣಯ ಕೈಗೊಳ್ಳುವ ಮುನ್ನ ಈ ಸಮಿತಿ ಮುಂದೆ ಇಡಬೇಕು ಎಂದೂ ಆದೇಶಿಸಿದ್ದರು. ಎಲ್ಲವನ್ನೂ ಮಹಾರಾಷ್ಟ್ರ ಸರ್ಕಾರ ಗಾಳಿಗೆ ತೂರಿದೆ.

ಎಲ್ಲೆಲ್ಲಿ ಪ್ರಯೋಜನ:

ಬೆಳಗಾವಿ, ಬೀದರ್‌, ಕಲಬುರಗಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ, 12 ತಾಲ್ಲೂಕುಗಳಿಲ್ಲಿರುವ 865 ಹಳ್ಳಿಗಳ ಎಲ್ಲ ಭಾಷಿಗರೂ ಈ ವಿಮೆಯ ಫಲಾನುಭವಿ ಆಗಬಹುದು. ಸಣ್ಣ ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳನ್ನೂ ಒಳಗೊಂಡು ಒಟ್ಟು 996 ಕಾಯಿಲೆಗಳಿಗೆ ವಿಮೆ ಅನ್ವಯ.

ಕರ್ನಾಟಕ ಹಾಗೂ ಮಹಾರಾಷ್ಟ್ರದ ದೊಡ್ಡ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಅವಕಾಶ. ವಾರ್ಷಿಕ ಗರಿಷ್ಠ ₹1.50 ಲಕ್ಷದವರೆಗೆ ವಿಮೆ ಸಿಗಲಿದೆ.

ಹೇಗೆ ಅನ್ವಯ:

ಕರ್ನಾಟಕ ಸರ್ಕಾರ ನೀಡಿದ ಅಂತ್ಯೋದಯ ಪಡಿತರ ಚೀಟಿ, ಮಹಾರಾಷ್ಟ್ರ ಸರ್ಕಾರದ ಅನ್ನಪೂರ್ಣ ಪಡಿತರ ಚೀಟಿ ಅಥವಾ ವಾರ್ಷಿಕ ಆದಾಯದ ದಾಖಲೆ ನೀಡಿ ಇದನ್ನು ಬಳಸಿಕೊಳ್ಳಬಹುದು.

 


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ