Breaking News
Home / ರಾಜಕೀಯ / ರಾಜ್ಯದ ಕಾಂಗ್ರೆಸ್‌ ನಾಯಕರನ್ನು ಬೆದರಿಸಲುಐಟಿ, ಇ.ಡಿ, ಸಿಬಿಐ ಛೂ ಬಿಡಲು ಬಿಜೆಪಿ ಸರ್ಕಾರ ರೆಡಿ: ಸಿದ್ದರಾಮಯ್ಯ

ರಾಜ್ಯದ ಕಾಂಗ್ರೆಸ್‌ ನಾಯಕರನ್ನು ಬೆದರಿಸಲುಐಟಿ, ಇ.ಡಿ, ಸಿಬಿಐ ಛೂ ಬಿಡಲು ಬಿಜೆಪಿ ಸರ್ಕಾರ ರೆಡಿ: ಸಿದ್ದರಾಮಯ್ಯ

Spread the love

ಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜ್ಯದ ಕಾಂಗ್ರೆಸ್‌ ನಾಯಕರನ್ನು ಬೆದರಿಸಲು ಬಿಜೆಪಿ ಸರ್ಕಾರ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿ ದೆಹಲಿಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಂಗಳವಾರ ಮಾಧ್ಯಮ ಹೇಳಿಕೆ ನೀಡಿದ್ದಾರೆ.

 

ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ. ಸುರ್ಜೇವಾಲಾ ಅವರು ಹೇಳಿದಂತೆ ಹಲವು ಹಾಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ನಿಗಮ ಮಂಡಳಿಯ ಅಧ್ಯಕ್ಷರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಮುಂದಿನ ಚುನಾವಣೆಯಲ್ಲಿ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ ಎಂದಿದ್ದಾರೆ.

ಬಿಜೆಪಿ ಹೈಕಮಾಂಡ್‌ ಗೆ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ. ಅವರಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ. ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್‌ ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ. ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ, ಜನ ಹಿಂದಿನ ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ರಾಜ್ಯದ ಎಲ್ಲಿಗೇ ಹೋದರು ಬಹುತೇಕ ಜನ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದಾರೆ, ಇದರಿಂದ ಬಿಜೆಪಿಗರು ಬೆದರಿದ್ದಾರೆ ಎಂದಿದ್ದಾರೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ