Breaking News

ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

Spread the love

ಬೆಂಗಳೂರು: ಭಾರೀ ಮಳೆ, ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿದ್ದು, ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು, ಜೊತೆಗೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ಹಾಗೂ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಯ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ವಾಸ್ತವಾಂಶ ಪರಿಶೀಲಿಸಲು ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆಗೆ ನಿರ್ಧರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಅ.21ರಂದು ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ