ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಾಗಿ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಸುದೀಪ್ ಘೋಷಣೆಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ.
ತಮ್ಮ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಮಾಜಿ ಮುಖ್ಯ ಮಂತ್ರಿ ಬಿಎಸ್ವೈ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಬಿಜೆಪಿ ನಡೆಗೆ ಕಾಂಗ್ರೆಸ್ ವ್ಯಂಗ್ಯವಾಡಿ ಟ್ವೀಟ್ ಮಾಡಿದೆ.