ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಮತ್ತಷ್ಟು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬುಧವಾರ ಬೆಳಗಿನ ಜಾವ ಹಿರೇಬಾಗೇವಾಡಿ ಟೋಲ್ ನಾಕಾ ಬಲಿ 2 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಸಂಜೆ ಹಿಟ್ನಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದ ರೂ.11,49,000 ನಗದನ್ನು ಎಸ್‌ಎಸ್‌ಟಿ, ಎಫ್‌ಎಸ್‌ಟಿ, ಎಂಸಿಸಿ ನೋಡಲ್ ಅಧಿಕಾರಿ, ಸಿಪಿಐ, ಹುಕ್ಕೇರಿ ಮತ್ತು ಸಿಪಿಐ ಸಂಕೇಶ್ವರ ತಂಡದ ಸಮನ್ವಯದಲ್ಲಿ ವಶಪಡಿಸಿಕೊಂಡಿದ್ದಾರೆ. ಮುಂದಿನ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಗೆ ತಿಳಿಸಲಾಗಿದೆ.
Laxmi News 24×7