ರಾಮನಗರ: ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಪೊಲೀಸರು ರಾಜಸ್ತಾನದಲ್ಲಿ ಬಂಧಿಸಿದ್ದಾರೆ. ಕನಕಪುರದ ಸಾತನೂರು ಬಳಿ ಜಾನುವಾರು ರಕ್ಷಣೆ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನವಾಗಿದೆ.
ಜಾನುವಾರು ವ್ಯಾಪಾರಿ ಇದ್ರೀಷ್ ಪಾಷ ಎಂಬುವವರು ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಘಟನೆ ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ತಲೆಮರೆಸಿಕೊಂಡಿದ್ದರು. ಆರೋಪಿಗಳ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿ ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದರು. ಇದೀಗ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.
ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಗೋ ಸಂರಕ್ಷಣೆ ನೆಪದಲ್ಲಿ ತಮ್ಮ ಮೇಲೆ ದಾಳಿ ಮಾಡಲಾಗಿದೆ ಎಂದು ಕ್ಯಾಂಟರ್ ಚಾಲಕ ಪ್ರತಿದೂರು ನೀಡಿದ್ದರು. ಮರುದಿನ ಇದ್ದೀಷ್ ಪಾಷಾ ಎಂಬವರ ಶವ ಘಟನೆ ನಡೆದ ಸಮೀಪದಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮೃತಪಟ್ಟ ಇದ್ರೀಷ್ ಪಾಷಾ ಅವರ ಸಹೋದರ ಯೂನುಸ್ ಪಾಷಾ ಅವರು ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ನೀಡಿದ್ದರು. ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸಿದ್ದರು