Breaking News

ಮಧ್ಯರಾತ್ರಿ ಮತ್ತೆ 1.50 ಕೋಟಿ ರೂ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

Spread the love

ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.

ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದಾಗಿ ಬುಧವಾರ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 3.61 ಕೇಟಿ ರೂ. ನಗದು ಹಾಗೂ 60.47 ಲಕ್ಷ ರೂ. ಆಭರಣ ವಶಪಡಿಸಿಕೊಂಡಂತಾಗಿದೆ.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಎಸ್ಪಿ ಸಂಜೀವ ಪಾಟೀಲ ಅವರು ಕರ್ತವ್ಯ ನಿರತ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದ್ದಾರೆ.


Spread the love

About Laxminews 24x7

Check Also

ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ…

Spread the love ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ