Breaking News

ಅಂಕಲಗಿ ಶ್ರೀ ಗುರುಸಿದ್ಧ ಶ್ರೀಗಳಿಗೆ ಶೃದ್ಧಾಂಜಲಿ ಅರ್ಪಿಸಿದ ಹುಕ್ಕೇರಿ ಕಾರಂಜಿಮಠದ ಶ್ರೀಗಳು

Spread the love

ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು ನಷ್ಟವಾಗಿದೆ. ಶ್ರೀಗಳ ಆದರ್ಶ ಎಲ್ಲರಿಗೂ ಮಾದರಿ ಎಂದರು.

ಈ ಸಂದರ್ಭದಲ್ಲಿ ಪಾಶ್ಚಾಪುರ ಹಿರೇಮಠದ ಶ್ರೀ ವಿಶ್ವಾರಾದ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ