Breaking News

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ

Spread the love

ವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ.

 

ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ ಬೆಳಿಗ್ಗೆ 11 ಗಂಟೆಯೊಳಗೆ 2ನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಾವು ಈಗಾಗಲೇ 124 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದೇವೆ. ಆಡಳಿತಾರೂಢ ಬಿಜೆಪಿ ಇನ್ನೂ ಒಂದೇ ಒಂದು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ ಎಂದರು.

ಗುರುವಾರಬೆಳಿಗ್ಗೆ 11 ಗಂಟೆಯೊಳಗೆ ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ. ಎರಡು ದಿನ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆದಿದೆ. ಎಐಸಿಸಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷ ನೇತೃತ್ವದಲ್ಲಿ ನಡೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭಾಗಿಯಾಗಿದ್ದರು ಎಂದರು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ