ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Spread the love

ಬೆಂಗಳೂರು :ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 10 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮುಂದಿನ ಐದು ದಿನ ರಾಜ್ಯದ ಹಲವು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಐದು ದಿನಗಳ ಪೈಕಿ ಏಪ್ರಿಲ್ 8 ರವರೆಗೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಲಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಸಾಧಾರಣವಾಗಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ಉತ್ತರ ಒಳನಾಡಿನ ಹಲವು ಕಡೆ ತುಂತುರು ಮಳೆಯಾಗಲಿದ್ದು, ಏಪ್ರಿಲ್ 8 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ , ರಾಮನಗರ , ಮಂಡ್ಯ, ಮೈಸೂರು, ಹಾಸನ, ಬೆಳಗಾವಿ, ಬೀದರ್ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ