Breaking News

ನಟ ಸುದೀಪ್ ಚಿತ್ರಗಳನ್ನು ನಿರ್ಬಂಧಿಸಿ : ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲ ದೂರು

Spread the love

ಶಿವಮೊಗ್ಗ: ನನ್ನ ಕಷ್ಟ ಕಾಲದಲ್ಲಿ ಸದಾ ನಾನು ಮಾಮ ಎಂಬುದಾಗಿ ಕರೆಯುವಂತ ಸಿಎಂ ಬೊಮ್ಮಾಯಿ ( CM Bommai ) ಆಗಿದ್ದಾರೆ. ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ ಎಂಬುದಾಗಿ ನಟ ಕಿಟ್ಟ ಸುದೀಪ್ ( Actor Sudeep ) ಘೋಷಿಸಿದ್ದರು.

ಈ ಬೆನ್ನಲ್ಲೇ ವಿಧಾನಸಭಾ ಚುನಾವಣಾ ( Karnataka Assembly Election 2023 ) ನೀತಿ ಸಂಹಿತೆಯಿಂದಾಗಿ ಅವರ ನಟನೆಯ ಚಿತ್ರಗಳನ್ನು ತಡೆ ಹಿಡಿಯುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲರೊಬ್ಬರು ದೂರು ನೀಡಿದ್ದಾರೆ.

ಈ ಕುರಿತಂತೆ ಶಿವಮೊಗ್ಗದ ವಕೀಲ ಕೆ.ಪಿ ಶ್ರೀಪಾಲ ಎಂಬುವರು ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಮಿಂಚಂಚೆ ಮಾಡಿದ್ದು, ನೀತಿ ಸಂಹಿತೆ ಅನುಸಾರ ಮಾನ್ಯ ಕಿಚ್ವ ಸುದೀಪ್ ಇವರ ಚಲನಚಿತ್ರಗಳನ್ನು , ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳನ್ನು ಚುನಾವಣೆ ಮುಗಿಯುವ ವರೆಗೂ ತಡೆ ಹಿಡಿಯುವಂತೆ ಕೋರಿದ್ದಾರೆ.

ಕನ್ನಡದ ಚಲನಚಿತ್ರನಟ ಮಾನ್ಯ ಕಿಚ್ಚ ಸುದೀಪ್ ರವರು ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವ ವರೆಗೂ ಅವರ ನಟನೆಯ ಯಾವುದೇ ಚಲನ ಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿ.ಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ.ಶೋಗಳು ಪ್ರಸಾರವಾಗದಂತೆ ಮತ್ತು ಅವರು ನಟಿಸಿರುವ ಜಾಯಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಜರುಗಿಸಬೇಕು ಎಂದು ಹೇಳಿದ್ದಾರೆ.

ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನ ಚಿತ್ರಗಳು, ಮತ್ತು ಟಿ.ವಿ.ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ, ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂದಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು, ಒಬ್ಬ ಜವಬ್ದಾರಿಯುತ ನಾಗರೀಕನಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನಟ ಸುದೀಪ್ ಅವರ ಚಿತ್ರಗಳಿಗೆ ನೀತಿ ಸಂಹಿತೆ ಹಿನ್ನಲೆಯಲ್ಲಿ ತಡೆ ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ