Breaking News
Home / ಜಿಲ್ಲೆ / ಬಿಜಾಪುರ / ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್

ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್

Spread the love

ವಿಜಯಪುರ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಲಾಗಿದೆ. ಲಿಂಗಾಯತರಿಗೆ 10, ರೆಡ್ಡಿ ಲಿಂಗಾಯ ಸಮುದಾಯಕ್ಕೆ 1 ಟಿಕೆಟ್ ಕೊಟ್ಟರೆ, ಒಕ್ಕಲಿಗ ಸಮುದಾಯಕ್ಕೆ 10 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ಕುರುಬ ಸಮುದಾಯಕ್ಕೆ 3 ಟಿಕೆಟ್ ನೀಡಲಾಗಿದೆ.

ರೆಡ್ಡಿ ಸಮುದಾಯಕ್ಕೆ 1, ಪರಿಶಿಷ ಜಾತಿಗೆ 4, ಪರಿಶಿಷ್ಟ ಪಂಗಡ 2, ಮುಸ್ಲಿಂ ಸಮುದಾಯಕ್ಕೆ 3, ರಜಪೂತ, ಮರಾಠಿ, ರೆಡ್ಡಿ, ನಾಯ್ಡು ಸಮುದಾಯಕ್ಕತೆ ತಲಾ 1 ಟಿಕೆಟ್ ನೀಡಲಾಗಿದೆ. ಈ ಮೂಲಕ ಕಾಂಗ್ರೆಸ್ ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಹೆಚ್ಚಿನ ಟಿಕೆಟ್ ಗಳನ್ನು ಲಿಂಗಾಯತರು ಮತ್ತು ಒಕ್ಕಲರಿಗೆ ನೀಡಿದೆ.


Spread the love

About Laxminews 24x7

Check Also

ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ

Spread the loveಬೆಂಗಳೂರು, ಜೂ.6- ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ