Breaking News

ಬಳ್ಳಾರಿಯಲ್ಲಿ ಪೊಲೀಸರ ಕಾರ್ಯಾಚರಣೆ :10 ಲಕ್ಷ ರೂ. ನಗದು, 131.13 ಲೀ ಮದ್ಯ ವಶ

Spread the love

ಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಬುಧವಾರದಂದು ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 10 ಲಕ್ಷ ನಗದು ಹಣ ಸೇರಿ 131.13 ಲೀಟರ್ (ರೂ.50,268 ಸಾವಿರ ಬೆಲೆಬಾಳುವ) ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಹಿತಿ ನೀಡಿದ್ದಾರೆ.

 

ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು 43 ಫ್ಲೈಯಿಂಗ್ ಸ್ವ್ಯಾಡ್, 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡ ಕೆಲಸ ನಿರ್ವಹಿಸುತ್ತಿವೆ.

ಬುಧವಾರ ವರದಿಯ ಪ್ರಕಾರ, 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಟಾಟಿಕ್ ಸರ್ವೈವ್‍ಲೆನ್ಸ್ ಟೀಮ್(ಎಸ್‍ಎಸ್‍ಟಿ) ತಂಡವು ಪರಿಶೀಲನೆ ವೇಳೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷ ರೂ.ಗಳನ್ನು ವಶಪಡಿಸಿಕೊಂಡು ಕಮಿಟಿ ಮುಂದೆ ಹಾಜರು ಪಡಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಯಾವುದೇ ಎಫ್‍ಐಆರ್ ಪ್ರಕರಣ ದಾಖಲಿಸಿರುವುದಿಲ್ಲ.

ಅಬಕಾರಿ ಇಲಾಖೆಯಿಂದ 102.60 ಲೀಟರ್ ಮದ್ಯ(37,668 ಸಾವಿರ ರೂ. ಬೆಲೆಬಾಳುವ) ಹಾಗೂ ಪೊಲೀಸ್ ಇಲಾಖೆಯಿಂದ 28.53 ಲೀಟರ್ (12,600 ರೂ. ಬೆಲೆಬಾಳುವ) ಮದ್ಯ ಸೇರಿದಂತೆ ಒಟ್ಟು 131.13 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ