Breaking News

ವೈಎಸ್ ವಿ ದತ್ತಾಗೆ ಬಿಗ್ ಶಾಕ್ ಕಡೂರು ಕ್ಷೇತ್ರದಲ್ಲಿ ಕೆ.ಎಸ್. ಆನಂದ್ ಗೆ ಕಾಂಗ್ರೆಸ್ ಟಿಕೆಟ್

Spread the love

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ.

ಈ ನಡುವೆ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ವೈ.ಎಸ್. ವಿ ದತ್ತಾಗೆ ಬಿಗ್ ಶಾಕ್ ಎದುರಾಗಿದ್ದು, ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಬಂದ ವೈಎಸ್ ವಿ ದತ್ತಾ ಬದಲು ಕೆ.ಎಸ್ ಆನಂದ್ ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಕಡೂರು ಕ್ಷೇತ್ರದ ಸ್ಪರ್ಧೆ ಬಯಸಿ ವೈಎಸ್ ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. 2013 ರಲ್ಲಿ ಜೆಡಿಎಸ್ ನಿಂದ ಗೆದ್ದಿದ್ದ ವೈಎಸ್ ವಿ ದತ್ತಾಗೆ ಕಾಂಗ್ರೆಸ್ ನಿರಾಸೆ ಮಾಡಿದ್ದು, ಕಡೂರು ಕ್ಷೇತ್ರದಿಂದ ಕೆ.ಎಸ್. ಆನಂದ್ ಗೆ ಟಿಕೆಟ್ ಘೋಷಿಸಿದೆ.


Spread the love

About Laxminews 24x7

Check Also

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ಬೆಂಗಳೂರು ಯೋಜನೆಗಳ ಬಗ್ಗೆ ವಿವರವಾಗಿ ಉತ್ತರ ನೀಡಿದ ಡಿ.ಕೆ.ಶಿ

Spread the loveಬೆಂಗಳೂರು: “ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಆಲಮಟ್ಟಿ ಜಲಾಶಯ ಎತ್ತರಿಸಲು ಆಗಬೇಕಾದ ಭೂಸ್ವಾಧೀನ, ಕಲ್ಪಿಸಬೇಕಾದ ಪರಿಹಾರ ಹಾಗೂ ಪರಿಷ್ಕೃತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ