Breaking News

ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

Spread the love

ಬೆಂಗಳೂರು : ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

 

ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.ಆದರೆ ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತವಾಗಿದ ಹಿನ್ನೆಲೆಯಲ್ಲಿ ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣಗೆ ಬಿಜೆಪಿ ಟಿಕೆಟ್ ನೀಡಲು ಚಿಂತನೆ ನಡೆಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಈ ಬಗ್ಗೆ ಕೇಂದ್ರದ ನಾಯಕರು ಅಂತಿಮ ನಿರ್ಣಯ ತೆಗೆದುಕೊಳ್ಳುತ್ತಾರೆ, ಅಭ್ಯರ್ಥಿಗಳ ಪಟ್ಟಿ ನಾಳೆ ದೆಹಲಿಗೆ ಕಳಿಸಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ