Breaking News

ಬಿಜೆಪಿ ಟಿಕೆಟ್ ವಿಚಾರ ಕತ್ತಿ ಕುಟುಂಬದವರೇ ತೀರ್ಮಾನಿಸಲಿ

Spread the love

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದರೆ, ಮೊದಲ ಪಟ್ಟಿ ಪ್ರಕಟಿಸಿರುವ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸುತ್ತಿದೆ. ಆದರೆ ಬಿಜೆಪಿ ಮಾತ್ರ ಇನ್ನೂ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ.

 

ಇದರ ಮಧ್ಯೆ ಸಚಿವರಾಗಿದ್ದ ಉಮೇಶ್ ಕತ್ತಿ ಪ್ರತಿನಿಧಿಸುತ್ತಿದ್ದ ಬೆಳಗಾವಿ ಜಿಲ್ಲೆ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವನ್ನು ಕತ್ತಿ ಕುಟುಂಬದವರೇ ತೀರ್ಮಾನಿಸಲಿ ಎಂಬ ಅಭಿಪ್ರಾಯವನ್ನು ಬಿಜೆಪಿ ನಾಯಕರು ಹೊಂದಿದ್ದಾರೆ ಎಂದು ಹೇಳಲಾಗಿದೆ.

ಹೃದಯಾಘಾತದಿಂದ ಉಮೇಶ್ ಕತ್ತಿ ನಿಧನರಾದ ಬಳಿಕ ಅವರ ಕುಟುಂಬದವರಿಗೆ ಟಿಕೆಟ್ ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದು, ಆದರೆ ಉಮೇಶ್ ಕತ್ತಿಯವರ ಪುತ್ರ ನಿಖಿಲ್ ಗೆ ಟಿಕೆಟ್ ನೀಡಬೇಕೋ ಅಥವಾ ಉಮೇಶ್ ಕತ್ತಿಯವರ ಸಹೋದರ ರಮೇಶ್ ಕತ್ತಿ ಅವರಿಗೆ ನೀಡಬೇಕೋ ಎಂಬ ಗೊಂದಲ ಕಾಡುತ್ತಿದೆ. ಹೀಗಾಗಿ ಈ ವಿಚಾರವನ್ನು ಕತ್ತಿ ಕುಟುಂಬದವರೇ ತೀರ್ಮಾನಿಸಲಿ ಎಂಬ ನಿಲುವನ್ನು ಬಿಜೆಪಿ ನಾಯಕರು ಹೊಂದಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ