Breaking News

ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಲಕ್ಷ್ಮಣ ಸವದಿ ಹೇಳಿಕೆ

Spread the love

ಕ್ಷ ನನಗೆ ಮೋಸ ಮಾಡುವುದಿಲ್ಲ. ಶೇ 99ರಷ್ಟು ನನಗೆ ಟಿಕೆಟ್ ಕೊಡುತ್ತದೆ ಎಂದು ವಿಶ್ವಾಸವಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಪಂಚಮಸಾಲಿ ಸಮಾಜದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲಕ್ಷ್ಮಣ ಸವದಿಚಿಕ್ಕೋಡಿ : ಅಥಣಿಯಲ್ಲಿ ರಾಜಕೀಯ ವಾತಾವರಣ ಬದಲಾಗಿದೆ.

ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಎಂದು ಲಕ್ಷ್ಮಣ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಣಗಿ ಸಾಂಸ್ಕ್ರತಿಕ ಭವನದಲ್ಲಿ ಪಂಚಮಸಾಲಿ ಸಮಾಜದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಥಣಿ ಸುದ್ದಿಗಳನ್ನು ದಿನನಿತ್ಯ ನೀವು ಮಾಧ್ಯಮಗಳಲ್ಲಿ ನೋಡುತ್ತಿದ್ದೀರಿ. ಒಂದು ಕಡೆ ಮಹೇಶ್ ಕುಮಟಳ್ಳಿಗೆ ಟಿಕೆಟ್, ಮತ್ತೊಂದು ದಿನ ಲಕ್ಷ್ಮಣ ಸವದಿಗೆ ಟಿಕೆಟ್ ಎಂದು ಚರ್ಚೆ ಆಗುತ್ತಿದೆ. ಆದರೆ, ಯಾರಿಗೆ ಟಿಕೆಟ್ ಎಂಬುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಕಳೆದ ಎರಡು ದಿನದಿಂದ ಕೋರ್ ಕಮಿಟಿ ಸಭೆ ನಡೆಸಲಾಗಿದೆ. ಆ ಸಭೆಯಲ್ಲಿ ಸಿಎಂ ಸೇರಿದಂತೆ 14 ಜನ ಇರುತ್ತಾರೆ. ಎರಡು ದಿನಗಳ ಕಾಲ ಪ್ರತಿ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ. ಒಂದು ಕ್ಷೇತ್ರಕ್ಕೆ ಮೂರು ಅಭ್ಯರ್ಥಿಗಳು ಎಂದು ಪಟ್ಟಿ ಸಿದ್ಧ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ಪಟ್ಟಿಯನ್ನು ದೆಹಲಿಗೆ ಕಳಿಸುತ್ತಾರೆ. ನಿನ್ನೆ ಸಭೆ ಮುಗಿದಿದೆ ಎಂದು ಹೇಳಿದರು.

“ಆ ಸಭೆಯಲ್ಲಿ ಅಥಣಿ ಕ್ಷೇತ್ರದ ಟಿಕೆಟ್ ವಿಚಾರ ಬಂತು. ಈ ವೇಳೆ ಸಭೆಯಲ್ಲಿ ನಾನು ಇರಬೇಕಾ?, ಬೇಡ್ವಾ? ಎಂದು ಕೇಳಿದೆ. ವರಿಷ್ಠರು ಇರುವಂತೆ ಸೂಚಿಸಿದರು. ಬಳಿಕ ಮಾತನಾಡಿದ ನಾನು, ಅಥಣಿ ಟಿಕೆಟ್ ಕಗ್ಗಂಟಾಗಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟವಾಗಲಿದೆ. ಒಂದು ವೇಳೆ, ಅವರು ಸೋತರೆ ಈ ಸೋಲನ್ನು ನನಗೆ ಹಣೆಪಟ್ಟಿ ಕಟ್ಟುವುದಕ್ಕೆ ನನ್ನ ಜಿಲ್ಲೆಯಲ್ಲಿ ಕೆಲವರು ಇದ್ದಾರೆ. ಪಕ್ಷಕ್ಕೆ ಅಭ್ಯರ್ಥಿಗಳ ಸೋಲು ಬೇಡ, ನನಗೆ ಟಿಕೆಟ್ ಕೊಡಿ ನಾನು ಗೆಲ್ಲುತ್ತೇನೆ ಎಂದು ಕೇಳಿದ್ದೇನೆ. ಆ ಕೋರ್ ಕಮಿಟಿಯಲ್ಲಿ ಈ ಎಲ್ಲಾ ವಿಚಾರವನ್ನು ಹೇಳಿದ್ದೇನೆ. ವರಿಷ್ಠರು ಯಾರಿಗೆ ಟಿಕೆಟ್ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕು” ಎಂದರು.

: ಟಿಕೆಟ್ ಕೇಳುವ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಮುಂದಾದ ಲಕ್ಷ್ಮಣ ಸವದಿ

ನಾನು ಬಿಜೆಪಿಯಲ್ಲಿ ಇದ್ದುಕೊಂಡು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ನನ್ನ ಸಿದ್ಧಾಂತದ ವಿಚಾರಕ್ಕೆ ವಿರುದ್ಧ ಇರುವ ಬೇರೆ ಬೇರೆ ಜಿಲ್ಲೆಗಳ ಅಭ್ಯರ್ಥಿಗಳ ಪರವಾಗಿ ಸಹ ಕೆಲಸ ಮಾಡಿದ್ದೇನೆ. ಪಕ್ಷ ನನಗೆ ಮೋಸ ಮಾಡುವುದಿಲ್ಲ. ಪಕ್ಷವು ನನಗೆ 99% ಟಿಕೆಟ್ ಕೊಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಸ್ವತಂತ್ರವಾಗಿ ಚುನಾವಣೆಗೆ ನಿಲ್ಲುವ ವಾತಾವರಣ ಬರುವುದಿಲ್ಲ. ನಮ್ಮ ನಾಯಕರಿಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಪಕ್ಷ ಪ್ರಾಮಾಣಿಕ ಕಾರ್ಯಕರ್ತರನ್ನು ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಕಾಂಗ್ರೆಸ್​ನವರು ಗೆಲುವಿನ ಹುಮ್ಮಸ್ಸಿನಲ್ಲಿ ಇದ್ದಾರೆ. ಆ ಅವಕಾಶವನ್ನು ನಾನು ಮಾಡಿ ಕೊಡುವುದಿಲ್ಲ, ನನ್ನ ವಿಧಾನಪರಿಷತ್ ಅವಧಿಯನ್ನು ಕುಮಟಳ್ಳಿಗೆ ಕೊಡಿ ಎಂದು ಕೇಳಿದ್ದೇನೆ. 10ನೇ ತಾರೀಕು ಎಲ್ಲವೂ ಸ್ಪಷ್ಟವಾಗುತ್ತದೆ ಎಂದರು.

:ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ಜನತೆಗೂ ಮೋದಿ ಆಡಳಿತ ಬೇಕು: ಲಕ್ಷ್ಮಣ ಸವದಿ

ಪಂಚಮಸಾಲಿ ಸಮಾಜ ಯಾವತ್ತೂ ನನ್ನ ಜೊತೆ ಇದೆ‌. ಅವರ ಜೊತೆಗೆ ನಾನು ಇರುತ್ತೇನೆ. ಮೀಸಲಾತಿ ವಿಚಾರದಲ್ಲಿ ಶ್ರೀಗಳಿಗೆ ಅಂದು ನಾನು ಮಾತು ನೀಡಿದ್ದೆ. ಈ ವಿಚಾರವಾಗಿ ಕ್ಯಾಬಿನೆಟ್ ಸಭೆ ನಡೆದಿತ್ತು. ಆ ಸಭೆಯಲ್ಲಿ ಹಲವಾರು ಸಲಹೆ ನೀಡಿದ್ದೆ. ಆದರೆ, ಲಕ್ಷ್ಮಣ ಸವದಿ ಸಮಾಜದ ಮೀಸಲಾತಿ ವಿಚಾರದಲ್ಲಿ ವಿರೋಧ ಮಾಡಿದ್ದಾರೆ ಎಂದು ಶ್ರೀಗಳಿಗೆ ಹೇಳಿದರು. ಶ್ರೀಗಳು ನನ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಾನು ಯಾವತ್ತೂ ಪಂಚಮಸಾಲಿ ಮೀಸಲಾತಿಗಾಗಿ ಧ್ವನಿ ಎತ್ತಿದವನು. ಈ ಸಮಾಜಕ್ಕೆ ಮೀಸಲಾತಿ ವಿಚಾರದಲ್ಲಿ ವಿರೋಧ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ 14 ನೇ ಪುಣ್ಯಸ್ಮರಣೆ 7 ಬಾರಿ ಸಂಸದರಾಗಿ ಮಾಡಿದ ಕಾರ್ಯ ಅಮೂಲ್ಯ – ಸಚಿವ ಸತೀಶ್ ಜಾರಕಿಹೊಳಿ

Spread the loveಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ 14 ನೇ ಪುಣ್ಯಸ್ಮರಣೆ 7 ಬಾರಿ ಸಂಸದರಾಗಿ ಮಾಡಿದ ಕಾರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ