Breaking News

“ಟಿಕೆಟ್‌ ನೀರಿಕ್ಷೆಯಲ್ಲಿದ್ದ  ಅಭ್ಯರ್ಥಿಗಳು ಕೈ ತಪ್ಪಿದರಿಂದ ನಿರಾಸೆಯಾಗುವುದು ಸಹಜ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ:  “ಟಿಕೆಟ್‌ ನೀರಿಕ್ಷೆಯಲ್ಲಿದ್ದ  ಅಭ್ಯರ್ಥಿಗಳು ಕೈ ತಪ್ಪಿದರಿಂದ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳು  ನಡೆಯಲಿದೆ ” ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್‌ ನಿಂದ  ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು  ಮಹಾಂತೇಶ ಕಡಾಡಿ ಅವರನ್ನು ಕಣಕ್ಕೆ ಇಳಿಸಲಾಗಿದೆ.  ಹೈಕಮಾಂಡ್  ತೀರ್ಮಾನ  ಅಂತಿಮ ತೀರ್ಮಾನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಯಾವ ಕ್ಷೇತ್ರದಕ್ಕೆ  ಯಾವ ಅಭ್ಯರ್ಥಿ ಸೂಕ್ತ ಎಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ.  ನಾವು  ಕೇಳಿದ ವ್ಯಕ್ತಿಗೆ ಟಿಕೆಟ್ ಸಿಗಬೇಕೆಂಬವುದು ನಿರ್ಧಾರ ಇಲ್ಲ ಎಂದ ಅವರು,  ಬಂಡಾಯದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ಮನವೊಲಿಸುವ ಪ್ರಯತ್ನಗಳು  ನಡೆದಿವೆ.   ಟಿಕೆಟ್‌ ನೀಡಿದ ಅಭ್ಯರ್ಥಿಯ  ಗೆಲುವಿಗೆ ಸಹಕರಿಸಬೇಕೆಂದು ಸೂಚನೆ ನೀಡಲಾಗಿದೆ.  ಆಕಾಂಕ್ಷಿಗಳಪಟ್ಟಿ  ಬಳಹ ಇದೆ  ಆತ್ಮೀಯರಿಗೆ ಸಿಗಬೇಕೆಂಬುವ ನಿರ್ಧಾರ ನಮ್ಮ ಕೈಯಲಿಲ್ಲ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದರು.

ಜಿಲ್ಲಾಧ್ಯಂತ ಬಂಡಾಯ ಇಲ್ಲ, ಕೆಲವೊಂದು ಕ್ಷೇತ್ರದಲ್ಲಿ ಇದೆ. ಎಲ್ಲವನ್ನು ಸರಿ ಮಾಡಲಾಗುವುದು. ಎರಡನೇಯ ಪಟ್ಟಿ ಬಿಡುಗಡೆ ಮಾಡಲಾಗಿದೆ.  ಶೀಘ್ರವೇ ಮೂರನೇಯ ಪಟ್ಟಿ ಪ್ರಕಟ ಮಾಡಲಾಗುವುದು. ನಾಲ್ಕನೆಯ ಪಟ್ಟಿ ಆದರೂ ಆಗಬಹುದು.   ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ.. ಅಳೆದು ತೂಗಿ ಪ್ರಭಾವಿ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸುತ್ತಾರೆ ಎಂದ ಅವರು, ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸ್ಟಾರ್‌ ನೇ ಎಂದರು.

ಮೋದಿ ಮೇಲಿಂದ ಮೇಲೆ ರಾಜ್ಯಕ್ಕೆ ಬರುತ್ತಿದ್ದಾರೆ ಇದರಿಂದ ನಿಮ್ಮ ಪಕ್ಷಕ್ಕೆ ಹಿನ್ನಡೆಯಾಗಬಹುದಾ ಎಂದ  ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,  ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದರೆ  ಬರಲಿ, ಅವರ ಪಕ್ಷದ ಪ್ರಚಾರಕ್ಕೆ ಬರುತ್ತಾರೆ. ಕಾಂಗ್ರೆಸ್‌ ನಾಯಕರು ತಮ್ಮ ಕ್ಷೇತ್ರದಲ್ಲಿ ಕೆಲಸಗಳ ಆಧಾರದ ಮೇಲೆ  ಗೆಲುವು ಸಾಧಿಸುತ್ತಾರೆ.  ಮೋದಿ ಆಗಮನದಿಂದ ರಾಜ್ಯದಲ್ಲಿ ಯಾವುದೇ ರೀತಿ ಬದಲಾವಣೆ ಆಗಲು ಸಾಧ್ಯವಿಲ್ಲ ಎಂದರು.

ಅಥಣಿ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಟಿಕೆಟ್ ಘೋಷಿಸದೆ ಕಾಯಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ಯಾರಿಗೂ ನಾವು ಕಾಯುವ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷದಲ್ಲೇ ಮೂವರು ಆಕಾಂಕ್ಷಿಗಳಿದ್ದಾರೆ. ಅವರ ಮಧ್ಯೆ ಹೊಂದಾಣಿಕೆ ಮಾಡುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ವಿಳಂಬವಾಗುತ್ತಿದೆ ಎಂದರು.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ