ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ಸರ್ಕಾರಿ ಬಸ್ ಹರಿದ ಪರಿಣಾಮ ಸ್ಥಳದಲ್ಲೇ 2 ವರ್ಷದ ಮಗು ಸಾವಿಗೀಡಾದ ಘಟನೆ ನಡೆದಿದೆ.
ಮೃತ ಮಗು ಶ್ಲೋಕ ಅಶೋಕ ತುಳಸಿಗೇರಿ (2) ಎಂದು ತಿಳಿದುಬಂದಿದೆ.
ಪರಮಾನಂದವಾಡಿಯಿಂದ ರಾಯಬಾಗ ಪಟ್ಟಣಕ್ಕೆ ತೆರಳುತ್ತಿದ್ದ ಬಸ್, ಮಗು ರಸ್ತೆ ದಾಟುವಾಗ ಹರಿದಿದೆ ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಸ್ಥಳೀಯರು ಬಸ್ಸಿನ ಗಾಜುಗಳನ್ನು ಪುಡಿಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಕುಡಚಿ ಪೊಲೀಸರು ಆಗಮಿಸಿ ಪ್ರತಿಭಟನಕಾರರನ್ನು ಸಮಾಧಾನಪಡಿಸಿದರು.
ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದು, ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.