Breaking News

ಸಾರ್ವಜನಿಕರ ಗಮನಕ್ಕೆ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಏಪ್ರಿಲ್ 10 ಕೊನೆಯ ದಿನ

Spread the love

ಧಾರವಾಡ : ಕರ್ನಾಟಕ ವಿಧಾನಸಭೆಗೆ ಭಾರತ ಚುನಾವಣಾ ಆಯೋಗವು ಮಾರ್ಚ್ 29 ರಂದು ಸಾರ್ವತ್ರಿಕ ಚುನಾವಣೆಯನ್ನು ಘೋಷಣೆ ಮಾಡಿದೆ. ಅದರಂತೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20 (ಗುರುವಾರ) ಆಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅರ್ಹ ಮತದಾರರು, ಮತದಾರರ ಯಾದಿಯಲ್ಲಿ ಹೆಸರುಗಳ ಸೇರ್ಪಡೆಯಾಗಿರುವ ಬಗ್ಗೆ https://ceo.karnataka.gov.in, https://www.nvsp.in ವೆಬ್‌ಸೈಟ್‌ಗಳಲ್ಲಿ ಹಾಗೂ Voter Helpline ಆಪ್‌ನಲ್ಲಿ ಮತ್ತು ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ. ಒಂದು ವೇಳೆ ಮತದಾರರ ಯಾದಿಯಲ್ಲಿ ಅರ್ಹ ಮತದಾರರ ಹೆಸರುಗಳು ಸೇರ್ಪಡೆಯಾಗದೇ ಇದ್ದಲ್ಲಿ, ಅಂಥಹ ಅರ್ಹ ಮತದಾರರು ದಿನಾಂಕ:10.04.2023 ರೊಳಗೆ https://www.nvsp.in ವೆಬ್‌ಸೈಟ್‌ನಲ್ಲಿ ಅಥವಾ Voter Helpline ಆಪ್‌ನಲ್ಲಿ ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ಏಪ್ರಿಲ್ 10 ರ ನಂತರ ನಮೂನೆ-6 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಈ ಚುನಾವಣೆ ಮುಗಿದ ನಂತರ ಮತದಾರರ ಯಾದಿಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ