Breaking News

ಅಂತಿಮಗೊಳ್ಳದ Congress ತೃತೀಯ ಪಟ್ಟಿ

Spread the love

ಬೆಂಗಳೂರು: ಕಾಂಗ್ರೆಸ್‌ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ.

ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್‌ ಘೋಷಿಸಲಾಗುತ್ತದೆ.

 

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್‌ನ ಮೂರನೇ ಮತ್ತು ಅಂತಿಮ ಪಟ್ಟಿ ಸಿದ್ಧಗೊಳಿ ಸಲು ಇಡೀ ದಿನ ಸಕ್ರಿಯವಾಗಿತ್ತು.

ಎರಡನೇ ಪಟ್ಟಿ ಬಳಿಕ ಕಾಂಗ್ರೆಸ್‌ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದೆ. ಈ ನಡುವೆ ಕೋಲಾರ, ಅಭ್ಯರ್ಥಿಗಳ ಆಯ್ಕೆಗೆ ತೀವ್ರ ಪೈಪೋಟಿ ಇರುವ ಪುಲಕೇಶಿನಗರ, ಬೆಂಗಳೂರು ದಕ್ಷಿಣ, ದಾಸರಹಳ್ಳಿ ಸಹಿತ ಹಲವು ಪ್ರತಿಷ್ಠಿತ ಕಣಗಳನ್ನು ಒಳಗೊಂಡ ಮೂರನೇ ಪಟ್ಟಿ ಸಿದ್ಧಪಡಿಸಬೇಕಿದೆ.

ಮೂಲಗಳ ಪ್ರಕಾರ ಬಿಜೆಪಿ ಪಟ್ಟಿ ಬಿಡುಗಡೆಗೊಂಡ ಬಳಿಕ ಕಾಂಗ್ರೆಸ್‌ ತನ್ನ ಪಟ್ಟಿಯನ್ನು ಅಂತಿಮಗೊಳಿಸಲಿದೆ ಎನ್ನಲಾಗುತ್ತಿದೆ. ಸೋಮವಾರ ಬಹುತೇಕ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ನಷ್ಟದಲ್ಲಿರುವ ಉದ್ಯಮಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡದಂತೆ ಆಗ್ರಹ

Spread the loveಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿ ನಷ್ಟದಲ್ಲಿರುವ ಕೆಲವು ಕಾರ್ಖಾನೆ ಮತ್ತು ಉದ್ಯಮಗಳಿಗೆ ಕೋಟ್ಯಂತರ ರೂಪಾಯಿ ಸಾಲ ಕೊಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ