ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸಿದೆ. ನವದೆಹಲಿಯಲ್ಲಿ ಬಿಜೆಪಿ ವರಿಷ್ಠರು ಸರಣಿ ಸಭೆಗಳನ್ನು ನಡೆಸಿದರೂ ಕೆಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಂಗಟ್ಟಾಗಿದ್ದು, ಇಂದು ಸಂಜೆ ಮತ್ತೊಂದು ಸುತ್ತಿನ ಸಭೆ ನದೆಸಲು ತೀರ್ಮಾನಿಸಲಾಗಿದೆ.
ನವದೆಹಲಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ತ್ರಾಧ್ಯಕ್ಷ ಜೆ.ಪಿ.ನಡ್ಡಾ ನಿವಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದರು.
ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ, ಆದರೆ ಇನ್ನೂ ಚರ್ಚೆಗಳಿರುವುದರಿಂದ ನಾಳೆ ಅಥವಾ ನಾಡಿದ್ದು ಮೊದಲ ಪಟ್ಟಿ ಬಿಡುಗಡೆಯಾಗಬಹುದು. ಸಂಜೆ ನಡೆಯಲಿರುವ ಸಭೆ ಬಳಿಕ ಗೊತಾಗಲಿದೆ ಎಂದರು.
ಅಭ್ಯರ್ಥಿಗಳ ಪಟ್ಟಿಯಲ್ಲಿ ಗೊಂದಲಗಳೇನೂ ಇಲ್ಲ, ಆದರೆ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ವಿಚಾರವಾಗಿ ಚರ್ಚೆ ನಡೆದಿದೆ. ಮೊದಲ ಪಟ್ಟಿಯಲ್ಲಿ ಕೆಲ ಹೊಸ ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಈ ಮೂಲಕ ಬಿಜೆಪಿಯ ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದ್ದು, ಈಬಾರಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
Laxmi News 24×7