ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ.
ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಸಂವಿಧಾನಕ್ಕೆ ಎಸಗಿದ ಅಪಚಾರ
ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ನಲ್ಲಿ ಪರೀಕ್ಷೆ ಬರೆದಿದ್ದಾರೆ ಮತ್ತು ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ.
Laxmi News 24×7