Breaking News

ಒಂದು ಕಡೆ ಸಫಾರಿ ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯ (ಭರ)ವರಸೆ ಎಂದು ಎಚ್​ಡಿಕೆ ಆಕ್ರೋಶ

Spread the love

ಬೆಂಗಳೂರು: ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ರಾಜಕಾರಣವೇ ಅನುಮಾನಾಸ್ಪದವಾಗಿದೆ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು. ಇದು ಬಿಜೆಪಿಯ (ಭರ)ವರಸೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಕೆಂಡಕಾರಿದ್ದಾರೆ.

 

ಇದೇ ನೋಡಿ ಅಸಲಿ ವರಸೆ
ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್​​ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿ ಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎನ್ನುವುದು ಸಚಿವ ಡಾ. ಅಶ್ವಥ್​ ನಾರಾಯಣ ಅವರ ಕುಹಕದ ಮಾತು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ