Breaking News

ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 2.10 ಕೋಟಿ ರೂಪಾಯಿ ಹಣ ಜಪ್ತಿ

Spread the love

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2.10 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ.

ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನವನ್ನು ತಪಾಸಣೆ ನಡೆಸಿದಾಗ 2.10 ಕೋಟಿ ನಗದು ಹಣ ಪತ್ತೆಯಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಸಹಕಾರಿ ಬ್ಯಾಂಕ್ ಶಾಖೆಗೆ ಹಣ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಆದರೆ ಹಣದ ಬಗ್ಗೆ ಸೂಕ್ತ ದಾಖಲೆ ಇಲ್ಲದ ಕಾರಣ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.


Spread the love

About Laxminews 24x7

Check Also

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ವೈ ವಿರುದ್ಧ ವಿಚಾರಣೆ ಅಗತ್ಯವಿದೆ: ಹೈಕೋರ್ಟ್

Spread the love ಬೆಂಗಳೂರು: ಅಪ್ರಾಪ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ