ಬೆಳಗಾವಿ: ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಪೊಲೀಸರು ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಹಣ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಸವದತ್ತಿ ಚೆಕ್ ಪೊಸ್ಟ್ ನಲ್ಲಿ 1.95 ಲಕ್ಷ ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಲಗೋಡಲ್ಲಿ 52 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಸಂಕೇಶ್ವರ ಚೆಕ್ ಪೊಸ್ಟ್ ನಲ್ಲಿ 2.31 ಲಕ್ಷ ರೂ. ಮೌಲ್ಯದ 10 ಟನ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
Laxmi News 24×7