ದೇವರ ಹಿಪ್ಪರಗಿಯ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆಯಿತು.
ಗ್ರಾಮದ ಅಭಿವೃದ್ಧಿ ವಿಚಾರವಾಗಿ ಸಿಟ್ಟಾಗಿದ್ದ ಕೆಲ ಗ್ರಾಮಸ್ಥರು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಶಾಸಕರನ್ನು ಊರಲ್ಲಿ ಸಿಸಿ ರಸ್ತೆಗಳಾಗಿಲ್ಲ, ಚರಂಡಿ ವ್ಯವಸ್ಥೆ ಸರಿ ಇಲ್ಲ, ಅಭಿವೃದ್ಧಿಗೆ ಬಂದಿದ್ದ ಹಣ ಏನ್ ಮಾಡಿದ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದರು
ಆ ಸಂದರ್ಭ ಶಾಸಕರ ಬೆಂಬಲಿಗರ ಜತೆ ಕೆಲ ಗ್ರಾಮಸ್ಥರು ವಾಗ್ವಾದ ನಡೆಸಿದ್ದಾರೆ.ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳೇ ಆಗಿಲ್ಲ ಎಂದು ಶಾಸಕ ಸೋಮನಗೌಡಗೆ ಜನ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಸಂದರ್ಭ ತಡೆಯಲು ಬಂದ ಶಾಸಕರ ಬೆಂಬಲಿಗರಿಗೂ ತರಾಟೆಗೆ ತೆಗೆದುಕೊಂಡರು.
Laxmi News 24×7