Breaking News

ಸಾಹುಕಾರ ಹಿಡಿದಿದನ್ನ ಮಾಡದೆ ಬಿಡಲ್ಲ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಅಥಣಿಯಲ್ಲಿ ಸವದಿಗೆ ಟಿಕೆಟ್ ಇಲ್ಲ ಎಂದ ಸಿಎಂ….!

Spread the love

ನವದೆಹಲಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಈ ಬಾರಿ ಟಿಕೆಟ್ ಇಲ್ಲ ಎನ್ನುವ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಸುದ್ದಿ ಹರಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು,

ಲಕ್ಷ್ಮಣ ಸವದಿ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಅಥಣಿ ಟಿಕೆಟ್ ಬೇಕೆಂದು ಅವರು ಕೇಳುತ್ತಿದ್ದಾರೆ.

ಆದರೆ ಮಹೇಶ ಕುಮಟಳ್ಳಿ ಅವರು ನಮ್ಮ ಸರಕಾರ ಅಸ್ಥಿತ್ವಕ್ಕೆ ಬರಲು ಕಾರಣರಾದವರು. ಹಾಗಾಗಿ ಲಕ್ಷ್ಮಣ ಸವದಿಯವರಿಗೆ ಮನದಟ್ಟು ಮಾಡಿದ್ದೇನೆ. ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ತಿಳಿಸಿದ್ದೇನೆ ಎಂದು ಹೇಳಿದರು.

ತನ್ಮೂಲಕ ಮಹೇಶ ಕುಮಟಳ್ಳಿಗೇ ಈ ಬಾರಿ ಅಥಣಿ ಟಿಕೆಟ್ ಎನ್ನುವ ಸುಳಿವನ್ನು ಬೊಮ್ಮಾಯಿ ನೀಡಿದರು.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ