Breaking News

ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದಪಾಗಲ್​ ಪ್ರೇಮಿ

Spread the love

ಬೀದರ್ : ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯೊಬ್ಬ (Lover) ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ.

 

 

ಶಿವಲೀಲಾ (18) ಕೊಲೆಗೀಡಾಗಿರುವ ಯುವತಿ. ಈಕೆ ಬ್ರೀಮ್ಸ್​ನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಇನ್ನೂ ಶ್ರೀನಿವಾಸ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಮದುವೆಯಾಗಲು (Marriage) ಇಷ್ಟವಿಲ್ಲ ಎಂದು ಹೇಳಿದ್ದಕ್ಕೆ ಶ್ರೀನಿವಾಸ ಸೋಲಪೂರ್ ಕೆರೆಯ ಬಳಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಆರೋಪಿ ಶ್ರೀನಿವಾಸ ಚಾಂಬೋಳ ಗ್ರಾಮದ ನಿವಾಸಿ.

ಶಿವಲೀಲಾ ಮಲ್ಲಿಕ್ ಮಿರ್ಜಾಪೂರ್ ಗ್ರಾಮದ ಹುಡುಗಿ. ಬೀದರ್ ನಗರದ ಮಂಗಲ್ ಪೇಟೆಯಲ್ಲಿ ತಾಯಿಯೊಂದಿಗೆ ವಾಸವಾಗಿದ್ದಳು. ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಶ್ರೀನಿವಾಸನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Spread the love

About Laxminews 24x7

Check Also

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Spread the loveಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು  ಬಡಿದು ಯುವರೈತ  ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ