Breaking News

ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ

Spread the love

ಬೆಳಗಾವಿ: ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ ಪಕ್ಷಕ್ಕೆ ಬರಮಾಡಿಕೊಲ್ಳಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಡೆಲಕ್ಷ್ಮಣ ಸವದಿ ನಿವಾಸಕ್ಕೆ ಕಾಗವಾಡ ಕಾಂಗ್ರೆಸ್ ಮಾಜಿ ಶಾಸಕ ರಾಜು ಕಾಗೆ ಭೇಟಿ ನೀಡಿದ್ದು, ಕೆಲ ಕಾಲ ಚರ್ಚೆ ನಡೆಸಿದ್ದಾರೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸವದಿ, ಟಿಕೆಟ್ ವಂಚಿಸಿದ ಪಕ್ಷದಲ್ಲಿ ಇರಲು ಸಾಧ್ಯವಿಲ್ಲ. ಹಾಗಾಗಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವೆ. ನಾಳೆ ಮತದಾರರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ