ವಾಹನದಲ್ಲಿ ಅಕ್ರಮವಾಗಿ ಗೋವು ಸಾಗಾಟ ವೇಳೆ ಪೊಲೀಸರು ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ.
ದಾಳಿ ವೇಳೆ ಡ್ರೈವರ್ ಸ್ಥಳದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ವಾಹನದಲ್ಲಿ 8ಕ್ಕೂ ಹೆಚ್ಚು ಗೋವುಗಳ ರಕ್ಷಣೆ ಮಾಡಲಾಗಿದೆ. ಕೆಎ 28 ಬಿ 0742 ನಂಬರಿನ ವಾಹನದಲ್ಲಿ ಗೋವು ಸಾಗಾಟ ಮಾಡಲಾಗುತ್ತಿತ್ತು.
ವಾಹನ, ಗೋವುಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7