Breaking News

ಕಾಂಗ್ರೆಸ್ ಎಂಎಲ್‍ಸಿ ಪ್ರಸನ್ನ ಕುಮಾರ್ ಪುತ್ರ ಹೃದಯಾಘಾತದಿಂದ ನಿಧನ

Spread the love

ಶಿವಮೊಗ್ಗ: ಜಿಲ್ಲೆಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತ ಸುಹಾಸ್‍ಗೆ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯಲ್ಲೇ ಕುಸಿದು ಬಿದ್ದಿದ್ದರು. ನಂತರ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್ ಕೊನೆಯುಸಿರು ಎಳೆದಿದ್ದಾರೆ. ಸುಹಾಸ್ ಗೆ ಕಳೆದ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು.ಎಂಎಲ್‍ಸಿ ಪ್ರಸನ್ನ ಕುಮಾರ್ ಅವರ ತೋಟದಲ್ಲಿ ಮೃತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೃತ ಸುಹಾಸ್ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ