ಕಲಬುರಗಿ : ರಾಜ್ಯ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಸದ್ಯ ಬಿಜೆಪಿ ಮುಖಂಡ, ಮಾಜಿ ಶಾಸಕ ದೊಡ್ಡಪ್ಪ ಗೌಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಕಲಬುರ್ಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ದೊಡ್ಡಪ್ಪಗೌಡ ಅವರಿಗೆ ಟಿಕೆಟ್ ಕೈತಪ್ಪಿದೆ.
ಇದರಿಂದ ಅಸಮಾಧಾನಗೊಂಡಿರುವ ದೊಡ್ಡಪ್ಪಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಗೆ ದೊಡ್ಡಪ್ಪಗೌಡ ಅವರು ಜೆಡಿಎಸ್ ನಿಂದ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ.
2008ರಲ್ಲಿ ಮಾಜಿ ಸಿಎಂ ಧರ್ಮಸಿಂಗ್ ಅವರನ್ನು ಸೋಲಿಸಿದ್ದ ದೊಡ್ಡಪ್ಪಗೌಡ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಿತ್ತು. ಆದರೆ ಜೇವರ್ಗಿ ಕ್ಷೇತ್ರದ ಟಿಕೆಟ್ ಬೇರೆಯವರ ಪಾಲಾದ ಹಿನ್ನೆಲೆಯಲ್ಲಿ ದೊಡ್ಡಪ್ಪಗೌಡ ರಾಜೀನಾಮೆ ನೀಡಿದ್ದಾರೆ.
Laxmi News 24×7