Breaking News
Home / ರಾಜಕೀಯ / ಕರ್ನಾಟಕ ವಿಧಾನಸಭಾ ಚುನಾವಣೆ’ಗೆ ‘ಗೆಜೆಟ್ ಅಧಿಸೂಚನೆ’ ಪ್ರಕಟ

ಕರ್ನಾಟಕ ವಿಧಾನಸಭಾ ಚುನಾವಣೆ’ಗೆ ‘ಗೆಜೆಟ್ ಅಧಿಸೂಚನೆ’ ಪ್ರಕಟ

Spread the love

ಬೆಂಗಳೂರು: 224 ಕರ್ನಾಟಕ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯನ್ನು ( Karnataka Assembly Election 2023 ) ದಿನಾಂಕ 29-03-2023ರಂದು ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆ ಮಾಡಲಾಗಿತ್ತು. ಮೇ.10ರಂದು ಮತದಾನ, ಮೇ.13ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿತ್ತು.

ಅದರಂತೆ ಇಂದು ಅಧಿಕೃತವಾಗಿ ಚುನಾವಣೆಗೆ ಗೆಜೆಟ್ ಅಧಿಸೂಚನೆಯನ್ನು ( gazette notification ) ಹೊರಡಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ಅಧಿಸೂಚನೆಯ ಅನುಸಾರ, ರಾಜ್ಯಪಾಲರಾದಂತ ಥಾವರ್ ಚೆಂದ್ ಗೆಹ್ಲೋಟ್ ಅವರು, ಇಂದು ಕರ್ನಾಟಕ ವಿಧಾನಸಭಾ ಚುನಾವಣೆ-2023ರಕ್ಕೆ ವಿಶೇಷ ರಾಜ್ಯಪತ್ರಿಕೆ ಪ್ರಕಟಿಸಿದ್ದಾರೆ.

ಪ್ರಕಟಿತ ಗೆಜೆಟ್ ಅಧಿಸೂಚನೆಯಲ್ಲಿ ರಾಜ್ಯ ವಿಧಾನಸಭೆಯ ಅವಧಿಯು ಮೇ.24, 2023ಕ್ಕೆ ಅಂತ್ಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆಯನ್ನು ಘೋಷಿಸಿದೆ ಎಂದು ತಿಳಿಸಲಾಗಿದೆ.

ಅಂದಹಾಗೇ ಇಂದು ರಾಜ್ಯ ವಿಧಾನಸಭಾ ಚುನಾವಣೆ ( Assembly Election ) ಸಂಬಂಧ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಇಂದಿನಿಂದಲೇ ನಾಮಪತ್ರಗಳ ಸಲ್ಲಿಕೆ ಆರಂಭಗೊಳ್ಳಲಿದೆ. ದಿನಾಂಕ 20-04-2023 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 21-04-2023ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 24-04-2023ರಂದು ಉಮೇದುವಾರಿಗೆ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.

ದಿನಾಂಕ 10-05-2023ರಂದು ಕರ್ನಾಟಕ ವಿಧಾನಸಭೆಗೆ ಮತದಾನ ನಡೆಯಲಿದೆ. ದಿನಾಂಕ 13-05-2023ರಂದು ಮತಗಳ ಏಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ದಿನಾಂಕ 15-05-2023ಕ್ಕೆ ಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದ್ದಾವೆ.

ವರದಿ: ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಇಂದು ಸಾಗರ ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಮೇ.10ರಂದು 224 ಕರ್ನಾಟಕ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಗಾಗಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿತ್ತು. ಮೊದಲ ದಿನ ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣೆಗಾಗಿ ಒಂದು ನಾಮಪತ್ರ ಸಲ್ಲಿಕೆಯಾಗಿದೆ.

ಈ ಕುರಿತಂತೆ ಸಾಗರ ತಾಲೂಕು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಮೇ 10ರಂದು ನಡಯಲಿರುವ ರಾಜ್ಯ ವಿಧಾನಸಭಾ ಚನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಯ್ಕೆ ಬಯಸಿ ಪಕ್ಸೇತರ ಅಭ್ಯರ್ಥಿಯಾಗಿ ಟಿ.ಎನ್. ಶ್ರೀನಿವಾಸ್ ಅವರು ಸಾಗರ ಚುನಾವಣಾಧಿಕಾರಿಗಳಿಗೆ ಒಂದು ನಾಮಪತ್ರವನ್ನು ಸಲ್ಲಿಸಿದರು. ಉಳಿದಂತೆ ಜಿಲ್ಲೆಯ ಬೇರೆ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆಗಿರುವುದಿಲ್ಲ ಎಂದಿದ್ದಾರೆ.

ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡರೆ ಸೂಕ್ತ ಕ್ರಮ

2023 ಸಾರ್ವತ್ರಿಕ ವಿಧಾನಸಭ ಚುನಾವಣೆಯಲ್ಲಿ ಮಕ್ಕಳ ದುರುಪಯೋಗ ತಡೆ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ತನ್ನ ಅಧಿನಿಯಮ 2005 ರ ಕಲಂ 13 ರನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಹಾಗೂ ಕಲಂ 14 ರಡಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯವು ನಿರ್ವಹಿಸುವ ಅಧಿಕಾರವನ್ನು ಹೊಂದಿರತ್ತದೆ.

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರರಣಗಳಿಗೆ ಸಂಬಂಧಿಸಿದಂತೆ ಆಯೋಗವು ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವ ಕಾರ್ಯ ವ್ಯಾಪ್ತಿ ಹೊಂದಿರುತ್ತದೆ.

ಆದ್ದರಿಂದ ರಾಜ್ಯದಲ್ಲಿ ನಡೆಯುವ ಚುನಾವಣಾ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ಮಕ್ಕಳನ್ನು ಬಳಸಿಕೊಳ್ಳುವುದನ್ನು, ಆಮಿಷಗಳನ್ನು ಒಡ್ಡುವುದು ಮತ್ತು ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದೆ. ಆದಾಗ್ಯೂ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು, ಆಮಿಷ ಒಡ್ಡುವುದು, ಉಡುಗೊರೆ ನೀಡುವುದು, ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕು ಉಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಬಳಸಿಕೊಂಡಿರುವುದು ಕಂಡುಬಂದಿದ್ದಲ್ಲಿ ಅಂತಹವರ ವಿರುದ್ದ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ವಿಶ್ವಸಂಸ್ಥೆಯ ಮಕ್ಕಲ ಹಕ್ಕುಗಳ ಒಡಂಬಡಿಕೆಯ ಕಲಂ 32, 36 ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) ಮತ್ತು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ-2018 ರನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ