Breaking News

ವಿವಿಧೆಡೆ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

Spread the love

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಂಠೀರವ ನಗರ, ಕಮಲಾನಗರ, ವಿಧಾನಸೌಧದ ಮುಂಭಾಗ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಅಂಬೇಡ್ಕರ್ ಸರ್ಕಲ್, ಅಂಬೇಡ್ಕರ್ ಭವನ ಹಾಗೂ ರವೀಂದ್ರ ಕಲಾಕ್ಷೇತ್ರ ಸೇರಿದಂತೆ ವಿವಿಧೆಡೆ ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ರವರು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ, ಅವರು ಮಾತನಾಡಿದರು.

 

ನಂತರ ಮಾತನಾಡಿದ ಅವರು, ಮಹಾನ್ ಮಾನವತವಾದಿ ಭಾರತರತ್ನ, ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಶ್ರೇಷ್ಠ ಸಂವಿಧಾನದ ಜೊತೆಗೆ ನವ ಭಾರತ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಅವರ ತತ್ವಾದರ್ಶ, ಚಿಂತನೆ, ಹೋರಾಟದ ಹಾದಿಯನ್ನು ಇಂದಿನ ಯುವಪೀಳಿಗೆ ಅರಿಯುವಂತಾಗಬೇಕು ಎಂದು ಹೇಳಿದರು.

ಡಾ.ಅಂಬೇಡ್ಕರ್ ರವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು ಎಂದು ಹೋರಾಟ ಮಾಡಿದ್ದಾರೆ. ದೀನ ದಲಿತರ, ಶೋಷಿತ ವರ್ಗದವರ ಏಳಿಗೆಗಾಗಿ ಹಗಲಿರುಳು ದುಡಿದಿದ್ದಾರೆ. ಬಾಬಾ ಸಾಹೇಬ್ ಅವರನ್ನು ಈ ದಿನ ಗೌರವದಿಂದ ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ