Breaking News
Home / ರಾಜಕೀಯ / ವರುಣದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ : ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಪಕ್ಷಕ್ಕೆ ಗುಡ್ ಬೈ

ವರುಣದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ : ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಪಕ್ಷಕ್ಕೆ ಗುಡ್ ಬೈ

Spread the love

ಮೈಸೂರು : ವರುಣ ಕ್ಷೇತ್ರದಿಂದ ಸಚಿವ ವಿ.ಸೋಮಣ್ಣಗೆ ಟಿಕಟ್ ನೀಡಿರುವುದಕ್ಕೆ ಅಸಮಾಧನಗೊಂಡಿರುವ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ವರುಣ ಕ್ಷೇತ್ರದಲ್ಲಿ ಸಚಿವ ವಿ.ಸೋಮಣ್ಣಗೆ ಟಿಕೆಟ್ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ತೋಟದಪ್ಪ ಬಸವರಾಜು ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

 

ವರುಣ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಅವರು ಕಳೆದ ಬಾರಿ ವರುಣದಿಂದ ಸ್ಪರ್ಧಿಸಿದ್ದರು. 2018 ರಲ್ಲಿ ವ್ಯಾಪಕ ವಿರುದ್ಧವಿದ್ದರೂ 37,819 ಮತಗಳನ್ನು ಪಡೆದಿದ್ದರು. ವರುಣದಲ್ಲಿ ನನಗೆ ಬಿಜೆಪಿ ಟಿಕೆಟ್ ನೀಡದಿರುವುದಕ್ಕೆ ಬೇಸರವಾಗಿದೆ. ವರುಣದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಬಹುದಾಗಿತ್ತು. ಮುಂದೆ ನಾನು ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗಲ್ಲ ಎಂದು ಹೇಳಿದ್ದಾರೆ.

ಇನ್ನು ಇಂದು ವರುಣ ಕ್ಷೇತ್ರದಲ್ಲಿ ಸಚಿವ ವಿ.ಸೋಮಣ್ಣ ಪ್ರಚಾರ ನಡೆಸಲಿದ್ದಾರೆ. ವರುಣ ಕ್ಷೇತ್ರದ ಹಲವು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ


Spread the love

About Laxminews 24x7

Check Also

ತಾಯಿಯ ಎದೆ ಹಾಲನ್ನು ಹೆಚ್ಚಿಸಲು ಈ ಗಿಡಮೂಲಿಕೆ ಬಳಸಿ

Spread the loveಭೂಮಿಯ ಮೇಲೆ ಹಲವಾರು ರೀತಿಯ ಔಷಧೀಯ ಗಿಡಗಳಿವೆ. ಇದರಿಂದಾಗಿ ಅವುಗಳನ್ನು ವಿವಿಧ ಔಷಧಿಗಳು ಮತ್ತು ಪರಿಹಾರ ಕ್ರಮಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ