Breaking News

ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ಜೊಲ್ಲೆ, ಹುಕ್ಕೇರಿ ನಡುವೆ ಬಿಗ್ ಫೈಟ್!

Spread the love

ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ನಿರ್ದೇಶಕರ ಸ್ಥಾನಕ್ಕೆ ಅ.22ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ನ.6ಕ್ಕೆ ನಡೆಯುವ ಚುನಾವಣೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ.

ಜಿಲ್ಲೆಯ ಹತ್ತು ತಾಲ್ಲೂಕಿನಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ. ಚಿಕ್ಕೋಡಿಯಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕ ಗಣೇಶ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆದಿದೆ.

ಡಿಸಿಎಂ ಲಕ್ಷ್ಮಣ ಸವದಿ ಮತ್ತು ರಮೇಶ್ ಕತ್ತಿ ಗುಂಪು ಅವಿರೋಧ ಆಯ್ಕೆ ಮಾಡುವಂತೆ ಆರ್ ಎಸ್ ಎಸ್ ಸೂಚನೆ ನೀಡಿದೆ. ಆದರೆ ಚಿಕ್ಕೋಡಿ, ಖಾನಾಪುರ ತಾಲ್ಲೂಕಿನಲ್ಲಿ ಅವಿರೋಧ ಆಯ್ಕೆ ಕಷ್ಟ ಸಾಧ್ಯ.

ಖಾನಾಪೂರ ತಾಲ್ಲೂಕಿನಲ್ಲಿ ಎಂಈಎಸ್ ಮಾಜಿ ಶಾಸಕ ಅರವಿಂದ ಪಾಟೀಲ ನಿರ್ದೇಶಕರಾಗಿದ್ದಾರೆ. ಈ ಬಾರಿ ಅವರನ್ನು ಸೋಲಿಸಲು ಖಾನಾಪೂರ ತಾಲ್ಲೂಕಿನಲ್ಲಿ ತಂತ್ರಗಾರಿಕೆ ನಡೆಯುತ್ತಿದೆ. ಬಿಜೆಪಿ ನಾಯಕ ವಿಠ್ಠಲ ಹಲಗೇಕರ, ಶಾಸಕಿ ಅಂಜಲಿ ನಿಂಬಾಳ್ಕರ್ ಇಬ್ಬರೂ ತಯಾರಿ ಮಾಡಿಕೊಂಡಿದ್ದಾರೆ. ಕೊನೆಯ ಘಳಿಗೆಯಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿಠ್ಠಲ ಹಲಗೇಕರ ಅವರಿಗೆ ಬೆಂಬಲ ಸೂಚಿಸುವ ಸಾಧ್ಯತೆಯೂ ಕೂಡ ಇದೆ.

ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಅರಬಾವಿ ಕ್ಷೇತ್ರದ ಶಾಸಕ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಾತ್ರವೂ ಇದೆ. ಇದರಿಂದಾಗಿಯೇ ಬೆಳಗಾವಿಯಲ್ಲಿ ಠಿಖಾಣಿ ಹುಡಿದ್ದಾರೆ.

ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ಬಿಜೆಪಿ ಪಾಲಿಗೆ ಪ್ರತಿಷ್ಠೆಯಾಗಿದ್ದು, ಯಾವ ರೀತಿ ಚುನಾವಣೆ ಕಣ ಸಿದ್ದವಾಗಲಿದೆ ನೋಡಬೇಕಿದೆ.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ